ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು (ಗುರುವಾರ) ನಡೆದಿದೆ. ಸಂಜೆ 5 ಗಂಟೆ ವೇಳೆಗೆ ಶೇ 60.18ರಷ್ಟು ಮತದಾನವಾಗಿದೆ.
ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ವಾಹನದ ಮೇಲೆ ದಾಳಿ ಸೇರಿದಂತೆ ಹಲವು ಕಡೆಗಳಲ್ಲಿ ಹಿಂಸಾಚಾರದ ವರದಿಯಾಗಿದೆ.
ಮೊದಲ ಹಂತದಲ್ಲಿ 121 ಸ್ಥಾನಗಳಿಗೆ ಮತದಾನ ನಡೆದಿದೆ. ಒಟ್ಟು 3.75 ಕೋಟಿ ಮತದಾರರಿದ್ದಾರೆ.
ಬೆಗುಸರಾಯ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ 67.32ರಷ್ಟು ಮತದಾನವಾಗಿದೆ. ಹಾಗೆಯೇ ಸಮಸ್ಟಿಪುರದಲ್ಲಿ ಶೇ 66.65, ಮಾಧೇಪುರದಲ್ಲಿ ಶೇ 65.74ರಷ್ಟು ಮತದಾನವಾಗಿದೆ.
ಮೊದಲ ಹಂತದಲ್ಲಿ 'ಇಂಡಿಯಾ' ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಉಪ ಮುಖ್ಯಮಂತ್ರಿ ಬಿಜೆಪಿಯ ಸಾಮ್ರಾಟ್ ಚೌಧರಿ ಕಣದಲ್ಲಿರುವ ಪ್ರಮುಖರಾಗಿದ್ದಾರೆ.




