ಸರ್ಕಾರೇತರ ಸಂಸ್ಥೆ ಅಸೋಸಿಯೇಶನ್ ಪಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಪ್ರಶಾಂತ್ ಭೂಷಣ್, ಈ ವಿಷಯ ತುಂಬಾ ಮುಖ್ಯವಾಗಿದೆ.
ಯಾಕೆಂದರೆ, ಇದು ಪ್ರಜಾಪ್ರಭುತ್ವದ ಮೂಲತತ್ವದ ಮೇಲೆ ಪ್ರಭಾವ ಬೀರುತ್ತದೆ ಎಂದು ಪ್ರತಿಪಾದಿಸಿದರು.
ಬಳಿಕ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೋಯ್ಮಲ್ಯ ಬಾಗ್ಚಿ ಅವರನ್ನು ಒಳಗೊಂಡ ಪೀಠ, ಮನವಿಗಳ ವಿಚಾರಣೆಯನ್ನು ನವೆಂಬರ್ 11ರಿಂದ ಆರಂಭಿಸಲಾಗುವುದು ಎಂದು ಹೇಳಿತು.
ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿರುವುದರಿಂದ ಈ ವಿಚಾರಣೆ ತುರ್ತಾಗಿ ನಡೆಯಬೇಕಾಗಿದೆ ಎಂದು ಭೂಷಣ್ ಹೇಳಿದರು.




