ಮಂಜೇಶ್ವರ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಆಚರಣೆ ಹಾಗೂ ನೂತನವಾಗಿ ನಿರ್ಮಿಸಲಾದ ಅತ್ಯಾಧುನಿಕ ಸೌಲಭ್ಯಗಳುಳ್ಳ ನವಚೇತನ ಕೇರ್ ಸೆಂಟರ್‍ನ ಲೋಕಾರ್ಪಣೆ ಸಮಾರಂಭ ದೈಗೋಳಿ ಶ್ರೀ ಸಾಯಿ ನಿಕೇತನ ಸೇವಾಶ್ರಮದ ಆವರಣದಲ್ಲಿ ನ.23 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಅಪರಾಹ್ನ 2.30ಕ್ಕೆ ಶ್ರೀ ಸಂಸ್ಥಾನ ಗೋಕರ್ಣ - ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಲೋಕಾರ್ಪಣೆ ನೆರವೇರಿಸುವರು. ಸಮಾರಂಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಧ್ಯಕ್ಷತೆ ವಹಿಸುವರು.
ಮಣಿಪಾಲ್ ಹಾಸ್ಪಿಟಲ್ ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಜಾಲತಾಣ ಲೋಕಾರ್ಪಣೆಗೊಳಿಸುವರು. ಗೌರವಾನ್ವಿತ ಅತಿಥಿಗಳಾಗಿ ವೇದಮೂರ್ತಿ ಬೋಳಂತಕೋಡಿ ರಾಮ ಭಟ್, ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಎಚ್.ಮಹಾಲಿಂಗ ಭಟ್, ಮಂಜೇಶ್ವರ ಠಾಣೆಯ ಪೋಲೀಸ್ ಇನ್‍ಸ್ಪೆಕ್ಟರ್ ಅಜಿತ್‍ಕುಮಾರ್ ಪಾಲ್ಗೊಳ್ಳುವರು ಎಂದು ಪ್ರಮುಖರಾದ ಡಾ.ಶಾಮ ಭಟ್, ಸುಶೀಲಾ ಭಟ್, ಪವನ್ ಕುಮಾರ್ ಹಾಗೂ ಶ್ರೀ ಸಾಯಿ ಸೇವಾ ಪ್ರತಿಷ್ಠಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ತಿಳಿಸಿದ್ದಾರೆ.
ಕರ್ನಾಟಕ ಶಾಸೀಯ ಸಂಗೀತ
ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಆಚರಣೆಯ ಅಂಗವಾಗಿ ಬೆಳಗ್ಗೆ 9 ರಿಂದ ಪೂಜೆ, 11 ರಿಂದ ಡಾ.ವಿಜಯಲಕ್ಷ್ಮೀ ಸುಬ್ರಹ್ಮಣ್ಯಂ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಪಕ್ಕವಾದ್ಯ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ ಕಬೆಕ್ಕೋಡು, ಮೃದಂಗದಲ್ಲಿ ವೆಂಕಟ ಯಶಸ್ವಿ ಕಬೆಕ್ಕೋಡು ಜೊತೆಗೂಡುವರು.






