ಮುಂಬೈ: ಶಿವಸೇನಾ ಉದ್ಧವ್ ಠಾಕ್ರೆ ಬಣದ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದೆ.
ಈ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು, ನಾನು ಎರಡು ತಿಂಗಳು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ.
ಚಿಕಿತ್ಸೆ ಪಡೆಯಬೇಕಾಗಿದೆ. ಹೀಗಾಗಿ ಯಾರನ್ನೂ ಭೇಟಿಯಾಗುವುದಿಲ್ಲ ಎಂದು ಎಕ್ಸ್‌ನಲ್ಲಿ ಸಂಜಯ್ ಅವರು ಪೋಸ್ಟ್ ಹಂಚಿಕೊಂಡಿದ್ದರು.
63 ವರ್ಷದ ಸಂಜಯ್ ರಾವುತ್ ಮಹಾರಾಷ್ಟ್ರದ ಹಿರಿಯ ರಾಜಕಾರಣಿಯಾಗಿದ್ದು ಮಾಜಿ ಸಿಎಂ ಉದ್ಧವ್ ಅವರ ಪಕ್ಷದ ಪ್ರಮುಖ ವಕ್ತಾರರಾಗಿದ್ದರು.
ಆಸ್ಪತ್ರೆ ಹಾಗೂ ಕಾಯಿಲೆ ಬಗ್ಗೆ ಅವರು ಮಾಹಿತಿ ನೀಡಿಲ್ಲ. ಆದರೆ, ಸಂಜಯ್ ರಾವುತ್ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.




