ಕಾಸರಗೋಡು: ವಿಶೇಷ ಸಕ್ರಿಯ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪೂರ್ಣಗೊಂಡ ಎಣಿಕೆ ಕಾಸರಗೋಡು ಜಿಲ್ಲೆಯ ಗ್ರಾಮ ಕಚೇರಿಗಳಲ್ಲಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲು ನಡೆದ ಮೆಗಾ ಶಿಬಿರದಲ್ಲಿ ಜಿಲ್ಲೆ ಶೇ.53.36 ಚಟುವಟಿಕೆಯೊಂದಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನದಲ್ಲಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲ ಮುಖ್ಯ ಚುನವಣಾಧಿಕರಿ ಕೆ. ಇನ್ಬಶೇಖರ್ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿರುವ ಎಸ್‍ಐಆರ್ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಪ್ರಗತಿಪರಿಶೀಲನೆ ನಡೆಸಿದರು. ಕಾಸರಗೋಡು ಮತ್ತು ಮಂಜೇಶ್ವರ ಕ್ಷೇತ್ರಗಳಲ್ಲಿರುವ ಶಿಬಿರಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಬಿಎಲ್‍ಒಗಳ ಶ್ರಮವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು.





