ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದ್ದು, ಇದುವರೆಗೆ ವಿವಿಧ ವಿಭಾಗಗಳಿಗೆ 5475 ನಾಮಪತ್ರಗಳು ಸಲ್ಲಿಕೆಯಾಗಿವೆ. 4219 ಅಭ್ಯರ್ಥಿಗಳು ಇಲ್ಲಿಯವರೆಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಕಾಸರಗೋಡು ಜಿಲ್ಲಾ ಪಂಚಾಯಿತಿಯ ವಿವಿಧ ವಿಭಾಗಗಳಿಗೆ 67 ಹೊಸ ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇದುವರೆಗೆ 115 ನಾಂಪತ್ರ ಸಲ್ಲಿಕೆಯಾಘಿದೆ.
ನೀಲೇಶ್ವರ ಬ್ಲಾಕ್ ಪಂಚಾಯಿತಿಯಲ್ಲಿ 97, ಪರಪ್ಪ ಬ್ಲಾಕ್ ಪಂಚಾಯಿತಿಯಲ್ಲಿ 88, ಕಾಞಂಗಾಡು ಬ್ಲಾಕ್ ಪಂಚಾಯಿತಿಯಲ್ಲಿ 92, ಮಂಜೇಶ್ವರಂ ಬ್ಲಾಕ್ ಪಂಚಾಯಿತಿಯಲ್ಲಿ 86, ಕಾರಡ್ಕ ಬ್ಲಾಕ್ ಪಂಚಾಯಿತಿಯಲ್ಲಿ 74, ಕಾಸರಗೋಡು ಬ್ಲಾಕ್ ಪಂಚಾಯಿತಿಯಲ್ಲಿ 98 ನಾಮಪತ್ರ ಸಲ್ಲಿಕೆಯಾಗಿದೆ. ಕಾಞಂಗಾಡು ನಗರಸಭೆಯಲ್ಲಿ 337, ಕಾಸರಗೋಡು ನಗರಸಭೆಯಲ್ಲಿ 219, ಮತ್ತು ನೀಲೇಶ್ವರ ನಗರಸಭೆಯಲ್ಲಿ 171 ನಾಮಪತ್ರಗಳು ಸಲ್ಲಿಕೆಯಾಗಿದೆ.




