ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ವೈಟ್ ಕಾಲರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಪೋಟ ಸಂಭವಿಸಿದ್ದು, 9 ಪೊಲೀಸರು ಮೃತಪಟ್ಟಿದ್ದಾರೆ.
27 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ. ಮುಜಮ್ಮಿಲ್ ಗನಿಯ ಅವರ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ ಸ್ಪೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿದೆ.
ಘಟನಾ ಸ್ಥಳದಿಂದ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೂಲ್ ರೂಮ್‌ಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಠಾಣೆಯಲ್ಲಿದ್ದ 24 ಪೊಲೀಸರು ಹಾಗೂ 3 ನಾಗರಿಕರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.




