ಕಾಸರಗೋಡು: ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ 78ನೇ ವರುಷದ ಹುಟ್ಟು ಹಬ್ಬದ ಅಂಗವಾಗಿ ಭಜನಾ ಸಂಕೀರ್ತನೆ, ರುಧ್ರಾಭಿಷೇಕ, ವಿಶೇಷ ಕಾರ್ತಿಕ ಪೂಜೆ ಹಾಗೂ ಹೆಗ್ಗಡೆಯವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಕಾಸರಗೋಡು ಶ್ರೀಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು, ಹಾಗೂ ಭಜನಾ ಪರಿಷತ್ ಕಾಸರಗೋಡು ತಾಲೂಕು ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಜಿಲ್ಲಾ ಪ್ರಬಂಧಕ ಜನಾರ್ದನ, ಕಚೇರಿ ಪ್ರಬಂಧಕ ಶ್ರೇಯಸ್, ಕಾಸರಗೋಡು ವಲಯದ ಮೇಲ್ವಿಚಾರಕರಾದ ಗೋಪಾಲಕೃಷ್ಣ, ಕೂಡ್ಲು ನವ ಜೀವನ ಸಮಿತಿಯ ಸದಸ್ಯ ನಾರಾಯಣ, ಹರಿಜಾಲ್ ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ಸದಸ್ಯರಾದ ಜಯಲಕ್ಷ್ಮಿ ಹಾಗೂ ಕಚೇರಿ ಸಿಬ್ಬಂದಿ ಪಾಲ್ಗೊಂಡಿದ್ದರು.





