ಕಾಸರಗೋಡು: ನಗರದ ಬಾಲಭವನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಕಲಾಮೇಳ'ಕಿಂಡರ್ ಫೆಸ್ಟ್' ಆಯೋಜಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ ಕೆ ನಾಯರ್ ಕಾರ್ಯಕ್ರಮ ಉದ್ಘಾಟಿಸಿದರು. ಡಾ.ವೆಂಕಟರಮಣ ಹೊಳ್ಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ರಾಧಾಮಣಿ ಶುಭ ಹಾರೈಸಿದರು. ಶಿಕ್ಷಕಿ ಸುಜಾತಾ ಸ್ವಾಗತಿಸಿದರು. ಶಿಕ್ಷಕಿ ಅನಿತಾ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.





