ಮಂಗಳೂರು: ಕೇರಳ ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಕೇರಳ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೋಲೀಸ್ ಅಧಿಕಾರಿಗಳ ಸಭೆ ಶನಿವಾರ ಮಂಗಳೂರಿನ ಪೋಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಿತು.
`ಕೇರಳ ಕಣ್ಣೂರು ವಲಯದ ಯತೀಶ್ಚಂದ್ರ ಜಿ. ಎಚ್, ಕಾಸರಗೋಡು ಎಸ್ಪಿ ವಿಜಯ ಭರತ್ ರೆಡ್ಡಿ ಮಂಗಳೂರು ನಗರ ಪೋಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಸುಧೀರ್ ಕುಮಾರ್ ರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.
ಉಭಯ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳ ಮಾಹಿತಿ ವಿನಿಮಯ ಮಾಡಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳು, ವಾರಂಟ್ ಆಸಾಮಿಗಳು, ಅಂರಾರಾಜ್ಯ ಅಪರಾಧ ಪ್ರಕರಣಗಳು, ಮಾದಕದ್ರವ್ಯ ಸಾಗಾಟ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಎರಡು ರಾಜ್ಯಗಳಲ್ಲಿಯೂ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ವಾರಂಟ್ ಆಸಾಮಿಗಳ ಮಾಹಿತಿ ವಿನಿಮಯ ಮತ್ತು ಪತ್ತೆಗೆ ಕಾರ್ಯಯೋಜನೆ ರೂಪಿಸಲಾಗಿದ್ದು, ಅಪರಾಧ ಪ್ರಕರಣಗಳ ನಿಯಂತ್ರಣ ಮತ್ತು ಪತ್ತೆ ಕಾರ್ಯದಲ್ಲಿ ಪರಸ್ಪರ ಸಹಕಾರ, ಜಂಟಿ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿ, ವಿಚಾರ ವಿನಿಮಯ ನಡೆಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಕೇರಳ ಕಣ್ಣೂರು ವಲಯದ ಡಿಐಜಿಪಿ ಯತೀಶ್ಚಂದ್ರ ಕಾಸರಗೋಡು ಎಸ್ಪಿ ವಿಜಯ ಭರತ್ ರೆಡ್ಡಿ ಹಾಗೂ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರಿದ್ದರು.


