ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನ 9ನೇ ಘಟಿಕೋತ್ಸವ ನ. 11ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರ (ಸಿಎಸ್‍ಐಆರ್)ಮಹಾನಿರ್ದೇಶಕಿ ಡಾ. ಎನ್. ಕಲೈಸೆಲ್ವಿ, ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು ಎಂದು ಪ್ರಭಾರ ಹಣಕಾಸು ಅಧಿಕಾರಿ ಪೆÇ್ರ. ರಾಜೇಂದ್ರ ಪಿಲಾಂಗಟ್ಟೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಉಪಕುಲಪತಿ ಪೆÇ್ರ. ಸಿದ್ದು ಪಿ. ಅಲ್ಗೂರ್ ಅಧ್ಯಕ್ಷತೆ ವಹಿಸುವರು. ಪ್ರಭಾರ ಕುಲಸಚಿವ ಮತ್ತು ಪರೀಕ್ಷಾ ನಿಯಂತ್ರಕ ಡಾ. ಆರ್. ಜಯಪ್ರಕಾಶ್, ವಿಶ್ವವಿದ್ಯಾಲದ ಕೋರ್ಟ್ ಸದಸ್ಯರು, ಕಾರ್ಯಕಾರಿ ಮಂಡಳಿಯ ಸದಸ್ಯರು, ಶೈಕ್ಷಣಿಕ ಮಂಡಳಿಯ ಸದಸ್ಯರು,ಹಣಕಾಸು ಸಮಿತಿ ಸದಸ್ಯರು, ಡೀನ್‍ಗಳು, ವಿಭಾಗೀಯ ಮುಖ್ಯಸ್ಥರು, ವಿದ್ಯಾರ್ಥಿಗಳು, ಪೆÇೀಷಕರು, ಶಿಕ್ಷಕರು, ಸಿಬ್ಬಂದಿ ಭಾಗವಹಿಸಲಿದ್ದಾರೆ.
2025 ರಲ್ಲಿ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ 923 ವಿದ್ಯಾರ್ಥಿಗಳು ತಮ್ಮ ಪದವಿ ಪಡೆದುಕೊಳ್ಳಲಿದ್ದಾರೆ. 36ಮಂದಿಗೆ ಪದವಿ, 771 ಮಂದಿಗೆ ಸ್ನಾತಕೋತ್ತರ ಪದವಿ, 36ಮಂದಿಗೆ ಪಿಎಚ್‍ಡಿ ಪದವಿಗಳನ್ನು ಪಡೆದಿದ್ದಾರೆ ಮತ್ತು 80 ಮಂದಿ ಪಿಜಿ ಡಿಪೆÇ್ಲಮಾ ಪದವಿ ವಿತರಿಸಲಾಗುವುದು. ಪದವಿಪ್ರದಾನ ಸಮಾರಂಭದಲ್ಲಿ ಈಗಾಗಲೇ 750 ಜನರು ವೈಯಕ್ತಿಕವಾಗಿ ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿ ಅಧ್ಯಕ್ಷ ಪೆÇ್ರ. ಮನು, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ. ಸುಜಿತ್ ಉಪಸ್ಥಿತರಿದ್ದರು.




