ಕಾಸರಗೋಡು: ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ ಹಾಗೂ ಕಾಸರಗೋಡು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಸ್ಥಾಪಕಾಧ್ಯಕ್ಷ ಶಿವರಾಮ ಕಾಸರಗೋಡು ಅವರ 60 ರ ಅಭಿನಂದನಾ ಸಮಾರಂಭ ಕನ್ನಡ ಗ್ರಾಮದಲ್ಲಿ ನವೆಂಬರ್ 4 ರಂದು ಜರುಗಲಿದೆ,
ಬೆಳಗ್ಗೆ 10ಕ್ಕೆ ಧ್ವಜಾರೋಹಣ, 'ಶಿವರಾಮ ಕಾಸರಗೋಡು-60' ಫೆÇೀಟೋ ಗ್ಯಾಲರಿ ಉದ್ಘಾಟನೆ, ಕಾಸರಗೋಡು ಕರ್ನಾಟಕದೊಂದಿಗೆ ವಿಲೀನೀಕರಣಕ್ಕಾಗಿ ಹೋರಾಡಿದ 60 ಮಂದಿ ಕನ್ನಡ ಸತ್ಯಾಗ್ರಹಿಗಳ, ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ ನಮನ, ನುಡಿ ನಮನ ನಡೆಯಲಿದೆ. ಬೆಳಗ್ಗೆ 11ಕ್ಕೆ ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪೂರ್ವಾಧ್ಯಕ್ಷ ಡಾ. ಸಿ. ಸೋಮಶೇಖರ್(ಐಎಎಸ್) ಸರ್ವಾಧ್ಯಕ್ಷತೆಯನ್ನು ವಹಿಸುವರು. ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಸಾಕ್ಷ್ಯಚಿತ್ರ, ಅಭಿನಂದನಾ ಗ್ರಂಥವನ್ನು ಬಿಡುಗಡೆಗೊಳಿಸುವರು. ವಿವಿಧ ವಿಚಾರಗೋಷ್ಠಿ, ವಿಚಾರ ಸಂಕಿರಣ ನಡೆಯಲಿದೆ.
ಸಂಜೆ4ಕ್ಕೆ ಶಿವರಾಮ ಕಾಸರಗೋಡು 60 ನೇ ಜನ್ಮ ದಿನಾಚರಣೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಗೋ ಕುಟೀರಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭೂಮಿ ಪೂಜೆ ನೆರವೇರಿಸಿ ಆಶೀರ್ವಚನ ನೀಡುವರು. ಸೋಮಣ್ಣ ಬೇವಿನಮರದ ಭಿತ್ತಿಪತ್ರ ಬಿಡುಗಡೆಗೊಳಿಸುವರು. ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ವಾಟಾಳ್ ನಾಗರಾಜ್ ಸಮಾರೋಪ ಸಮಾರಂಭ ಉದ್ಘಾಟಿಸುವರು. ಡಾ. ಸಿ. ಸೋಮಶೇಖರ್ ಅಧ್ಯಕ್ಷೆತ ವಹಿಸವರು. ಈ ಸಂದರ್ಭ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಪ್ರದಾನ ಸಮರಂಭ, ರಾಜ್ಯಮಟ್ಟದ ಸಾಂಸ್ಕøತಿಕ ಕಾರ್ಯಕ್ರಮ ನಡೆಯುವುದು.

