ಕಾಸರಗೋಡು: ಮುಸ್ಲಿಂ ಲೀಗಿನ ಸಕ್ರಿಯ ಕಾರ್ಯಕರ್ತ, ಮುಹಮ್ಮದ್ ಸಾಲಿ ಅವರು ವಿದ್ಯುಕ್ತವಾಗಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರು, ಮಹಮ್ಮದ್ ಸಾಲಿ ಅವರನ್ನು ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು. ಮಂಡಲ ಸಮಿತಿ ಅಧ್ಯಕ್ಷ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನೀಲ್, ಜಿಲ್ಲಾ ಉಪಾಧ್ಯಕ್ಷ ಪಿ.ರಮೇಶ್, ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ಸುಹೈಲ್, ಮತ್ತು ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಪಲ್ಲಿಪುಳ ಉಪಸ್ಥಿತರಿದ್ದರು.





