ಕಾಸರಗೋಡು: ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಇದು ರಾಜ್ಯದ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅನ್ವಯವಾಗಲಿದೆ. ಮುಕ್ತ, ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು, ಚುನಾವಣಾ ಪ್ರಚಾರಗಳನ್ನು ನಡೆಸಲು ನೀತಿ ಸಂಹಿತೆಯನ್ನು ವಿಧಿಸಲಾಗುತ್ತಿದೆ.
ಜಾತಿ, ಸಮುದಾಯ ಅಥವಾ ಭಾಷೆಯ ಹೆಸರಿನಲ್ಲಿ ಮತ ಕೇಳುವುದು ಅಥವಾ ಚುನಾವಣಾ ಚಟುವಟಿಕೆಗಳಿಗೆ ಧಾರ್ಮಿಕ ಸಂಸ್ಥೆಗಳು ಮತ್ತು ಪೂಜಾ ಸ್ಥಳಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಧಾರ್ಮಿಕ, ಜನಾಂಗೀಯ, ಸಮುದಾಯ ಅಥವಾ ಭಾಷಾ ಘರ್ಷಣೆ ಉಂಟುಮಾಡುವ ಮತ್ತು ಪರಸ್ಪರ ದ್ವೇಷ ಭಾವನೆ ಪ್ರಚೋದಿಸುವ ಯಾವುದೇ ಪ್ರಚಾರ ಚಟುವಟಿಕೆಗೆ ಕಡ್ಡಾಯ ಅನುಮತಿ ನಿಷೇಧಿಸಲಾಗುವುದು. ಇತರ ಅಭ್ಯರ್ಥಿಗಳು ಅಥವಾ ವಿರೋಧ ಪಕ್ಷಗಳು ಕಾರ್ಯಕರ್ತರ ಖಾಸಗಿ ಜೀವನಕ್ಕೆ ಸಂಬಂಧಿಸಿದ ಟೀಕೆಗಳನ್ನು ಅನುಮತಿಸಬಾರದು.
ಚುನಾವಣಾ ಪ್ರಚಾರಕ್ಕಾಗಿ ಕೇಂದ್ರ, ರಾಜ್ಯ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿರುವವರು ಅಧಿಕಾರದಲ್ಲಿರುವ ಪಕ್ಷದ ಅಧಿಕೃತ ಸ್ಥಾನ ದುರುಪಯೋಗಪಡಿಸಿಕೊಳ್ಳುವುದು, ಸಚಿವರು, ಸಂಸದರು, ಶಾಸಕರು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ತಮ್ಮ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ಸವಲತ್ತುಗಳನ್ನು ಒದಗಿಸುವುದು, ಭರವಸೆ ನೀಡುವುದು ಅಥವಾ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಸದಂತೆಯೂ ನೀತಿಸಂಹಿತೆಯಲ್ಲಿ ತಿಳಿಸಲಾಗಿದೆ. ಯಾವುದೇ ಹೊಸ ಯೋಜನೆಗಳ ಉದ್ಘಾಟನೆಯಾಗಲಿ ಅಥವಾ ಹೊಸ ಯೋಜನೆಗಳನ್ನು ಪ್ರಾರಂಭಿಸುವುದಾಘಲಿ ನಡೆಸಬಾರದು. ನೀತಿ ಸಂಹಿತೆಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲು ಜಿಲ್ಲೆಗಳಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯಾಚರಿಸಲಿದ್ದು, ಜಿಲ್ಲಾಧಿಕಾರಿ ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಸಂಬಂಧಿತ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು, ಸಂಚಾಲಕರು, ಜಿಲ್ಲಾ ಪೆÇಲೀಸ್ ಮುಖ್ಯಸ್ಥರು ಮತ್ತು ಜಿಲ್ಲಾ ಮಾಹಿತಿ ಅಧಿಕಾರಿಯನ್ನು ಈ ಸಮಿತಿ ಒಳಗೊಂಡಿರಲಿದೆ ಎಂದು ಪ್ರಕಟಣೆ ತಿಳಿಸಿದೆ.




