ಕುಂಬಳೆ: ಶಂಪಾ ಪ್ರತಿಷ್ಠಾನ ಬೆಂಗಳೂರು ಇದರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಇದರ ಸಹಕಾರದೊಂದಿಗೆ ಚೇವಾರು ಸಮೀಪದ ಪೊಸಡಿಗುಂಪೆ ನಿಸರ್ಗಧಾಮದಲ್ಲಿ ಡಾ ಎಸ್. ಎಲ್ ಭೈರಪ್ಪನವರ ಸಂಸ್ಮರಣೆ ಹಾಗೂ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ನಡೆಯಿತು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ .ಎಂ.ಪಿ ಶ್ರೀನಾಥ್ ಕಾರ್ಯಕ್ರಮವನ್ನು ಸಾಲುಮರದ ತಿಮ್ಮಕ್ಕನವರ ಸ್ಮರಣೆಯೊಂದಿಗೆ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ವಿಶ್ರಾಂತ ಕುಲಪತಿ, ಜಾನಪದ ತಜ್ಞ ಡಾ .ಕೆ ಚಿನ್ನಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ,ಸಾಹಿತಿ ಡಾ.ಸುರೇಶ್ ಪಾಟೀಲ ಬೆಂಗಳೂರು,ಪತ್ರಕರ್ತ ಅಚ್ಯುತ ಚೇವಾರು ಮುಖ್ಯ ಅತಿಥಿಗಳಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಆಶಯ ಭಾಷಣ ಮಾಡಿದರು. ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಪ್ರಾರ್ಥನೆ ಹಾಡಿದರು. ಶಂ.ಪಾ ಪ್ರತಿಷ್ಠಾನದ ಅಧ್ಯಕ್ಷೆ ಡಾ .ಪ್ರಮೀಳಾ ಮಾಧವ್ ಸ್ವಾಗತಿಸಿ,ಪ್ರಾಸ್ತಾವಿಕ ಭಾಷಣ ಮಾಡಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ.ಎನ್ ಮೂಡಿತ್ತಾಯ ಧನ್ಯವಾದ ಸಮರ್ಪಿಸಿದರು. ಶಂಪಾ ಪ್ರತಿಷ್ಠಾನದ ಸಂಘಟನಾ ಕಾರ್ಯದರ್ಶಿ ಡಾ.ಎಚ್.ಎಲ್ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಬೈರಪ್ಪನವರ ಕೃತಿಗಳ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ ನಡೆಯಿತು. ಮೂಡಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಟಿ.ಎ.ಎನ್ ಖಂಡಿಗೆ(ಯಾನ), ಕಾಸರಗೋಡು ಸರಕಾರಿ ಕಾಲೇಜಿನ ಸಹಪ್ರಾಧ್ಯಾಪಕಿ ಡಾ.ವೇದಾವತಿ (ನಿರಾಕರಣ),ಶೇಣಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ಡಾ .ಸುಭಾಷ್ ಪಟ್ಟಾಜೆ(ಉತ್ತರಕಾಂಡ), ಖ್ಯಾತ ವಿಮರ್ಶಕ ಡಾ .ಬಿ. ಜನಾರ್ದನ ಭಟ್ ಬೆಳ್ಮಣ್ಣು(ಗೃಹಭಂಗ), ಬೆಂಗಳೂರು ಬಿ .ಎಂ. ಶ್ರೀ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಶಾಂತರಾಜು (ಸಾರ್ಥ), ಮೈಸೂರು ಮಹಾರಾಜ ಕಾಲೇಜಿನ ಪ್ರಾಧ್ಯಾಪಕ ಡಾ. ಟಿ .ಕೆ ಕೆಂಪೇಗೌಡ(ಆವರಣ), ಕೇಂದ್ರ ಸಾಹಿತ್ಯ ಅಕಾಡೆಮಿಯ ನಿವೃತ್ತ ಪ್ರಾದೇಶಿಕ ಕಾರ್ಯದರ್ಶಿ ಡಾ. ಮಹಾಲಿಂಗೇಶ್ವರ ಭಟ್ ಎಸ್.ಪಿ( ದೂರಸರಿದರು ) ,ಶಂಪಾ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ.ಶಾರದಾ ಬೆಂಗಳೂರು (ತಂತು), ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶಿವಶಂಕರ.ಪಿ(ಪರ್ವ), ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ. ರಾಧಾಕೃಷ್ಣ ಬೆಳ್ಳೂರು( ಅಂಚು), ಬಿ.ಎಸ್. ಎನ್.ಎಲ್ ನ ನಿವೃತ್ತ ಡಿಜಿಎಂ ಕೆ. ರಾಮಚಂದ್ರ(ಸಾಕ್ಷಿ), ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕಿ ಪೆÇ್ರ. ಲಕ್ಷ್ಮಿ.ಕೆ(ಮಂದ್ರ), ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ.ಏತಡ್ಕ
(ಜಲಪಾತ) ಕಾಸರಗೋಡು ಸರಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಿಕೆ ಡಾ. ಆಶಾಲತಾ (ನಾಯಿ ನೆರಳು) ,ಅನುವಾದಕಿ, ಲೇಖಕಿ ಶ್ರೀಮತಿ ಮಾಧುರಿ ದೇಶಪಾಂಡೆ ಬೆಂಗಳೂರು (ನೆಲೆ)ಕೃತಿಗಳ ಅವಲೋಕನ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಮತ್ತು ನಿವೃತ್ತ ಪ್ರಾಂಶುಪಾಲ ಎಚ್. ಎಲ್ ಮಂಜುನಾಥ್ ಬೆಂಗಳೂರು ಕಾರ್ಯಕ್ರಮ ನಿರೂಪಿಸಿದರು.






