ಮುಳ್ಳೇರಿಯ : ಮುಂದಿನ ಫೆಬ್ರವರಿ 22 ರಿಂದ 27ರ ತನಕ ನಡೆಯುವ ಮಿಂಚಿಪದವು ಶ್ರೀ ಕಾವೇರಮ್ಮ ಮಹಾಲಿಂಗೇಶ್ವರ ಕ್ಷೇತ್ರದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ. 28 ಶುಕ್ರವಾರ ಬೆಳಗ್ಗೆ 10ಕ್ಕೆ ಶ್ರೀಕ್ಷೇತ್ರದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರ ಉಪಸ್ಥಿತಿಯಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಬಿಡುಗಡೆಗೊಳಿಸುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕ್ಷೇತ್ರ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




