ಕಾಸರಗೋಡು: ರಾಷ್ಟ್ರೀಯ ಅಧ್ಯಾಪಕರ ಪರಿಷತ್ತಿನ(ಎನ್.ಟಿ.ಯು)47ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿ ರಚನಾ ಸಭೆಯು ಎನ್ ಟಿಯು ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ನಡೆಯಿತು. ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಸಮಾರಂಭ ಉದ್ಘಾಟಿಸಿದರು.
ಆರೆಸ್ಸೆಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಎನ್‍ಟಿಯು ರಾಜ್ಯಾಧ್ಯಕ್ಷ ಕೆ.ಸ್ಮಿತಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಅ. ಕೆ.ಕರುಣಾಕರನ್, ನಿವೃತ್ತ ಪೆÇಲೀಸ್ ವರಿಷ್ಠಾಧಿಕಾರಿ ಪಿ.ಹರಿಶ್ಚಂದ್ರ ನಾಯ್ಕ್, ಎ.ಜಿ ಕೆ.ಪ್ರಭಾಕರನ್ ನಾಯರ್, ಟಿ.ಸೀತಾರಾಮ್, ಪಿ.ಉಪೇಂದ್ರನ್, ಕೆ.ವಿ.ಬಾಬು, ಎ.ಶ್ಯಾಮ್‍ಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು. ಎನ್‍ಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಅನೂಪ್ ಕುಮಾರ್ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಟಿ. ಕೃಷ್ಣನ್ ವಂದಿಸಿದರು.




