ಇಂದೋರ್: ರಾಸಾಯನಿಕಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಶನಿವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವುತಾನಿ ಏಕಾದಶಿಯ ಅಂಗವಾಗಿ ದೀಪಗಳನ್ನು ಹೊತ್ತಿಸಿದ್ದ ವೇಳೆ ಈ ಘಟನೆ ನಡೆದಿದೆ.
ಈ ವೇಳೆ ಗೋದಾಮಿನ ಮಾಲಕ ಕೂಡಾ ಗಾಯಗೊಂಡಿದ್ದಾರೆ ಎಂದು ಓರ್ವ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇಂದೋರ್ ನ ರಾವು ಪ್ರದೇಶದಲ್ಲಿರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಅಲೋಕ್ ಶರ್ಮಾ ತಿಳಿಸಿದ್ದಾರೆ.




