ಕಾಸರಗೋಡು: ಸ್ಥಳೀಯಾಡಳಿತ ಚುನಾವಣೆ ಹಿನ್ನೆಲೆಯಲ್ಲಿ ಮೆರವಣಿಗೆ ಮತ್ತು ಸಾರ್ವಜನಿಕ ಸಭೆ ನಡೆಸುವ ಸಂಘಟನೆಯು ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆ ಮತ್ತು ನ್ಯಾಯಾಲಯಗಳ ಆದೇಶಗಳನ್ನುಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಯಾವುದೇ ರಾಜಕೀಯ ಪಕ್ಷಗಳ ಮೆರವಣಿಗೆ ಎಲ್ಲಿಂದ ಪ್ರಾರಂಭಗೊಂಡು, ಯಾವ ಮಾರ್ಗದಲ್ಲಿ ಸಾಗುತ್ತದೆ ಮತ್ತು ಎಲ್ಲಿ ಕೊನೆಗೊಳ್ಳುತ್ತದೆ ಎಂಬುದನ್ನು ಪಕ್ಷ ಅಥವಾ ಅಭ್ಯರ್ಥಿಯು ಮುಂಚಿತವಾಗಿಯೇ ನಿರ್ಧರಿಸಬೇಕು ಹಾಗೂ ಈ ಬಗ್ಗೆ ಸ್ಥಳೀಯ ಪೆÇಲೀಸರಿಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.
ಮೆರವಣಿಗೆ ಹಾದುಹೋಗುವ ಪ್ರದೇಶಗಳಲ್ಲಿ ನಿಬಂಧನೆ ಜಾರಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಂಡು ಮೆರವಣಿಗೆ ಮುಂದುವರಿಸಬೇಕು ಹಾಗೂ ಆದೇಶ ಕಟ್ಟು ನಿಟ್ಟಾಗಿ ಪಾಲಿಸಬೇಕು. ಮೆರವಣಿಗೆ ಹೆಚ್ಚು ಜನರಿಂದ ಕೂಡಿದ್ದರೆ, ಸರತಿಸಾಲು ಹೆಚ್ಚು ಉದ್ವಾಗದಂತೆ ನೋಡಿಕೊಳ್ಳಬೇಕು. ಮೆರವಣಿಗೆ ಹಾದುಹೋಗುವ ಮಧ್ಯೆ ಕರ್ತವ್ಯದಲ್ಲಿರುವ ಪೆÇಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎರಡು ಅಥವಾ ಹೆಚ್ಚಿನ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಒಂದೇ ಸಮಯದಲ್ಲಿ ಒಂದೇ ಮಾರ್ಗದಲ್ಲಿ ಅಥವಾ ಒಂದೇ ಮಾರ್ಗದ ಕೆಲವು ಭಾಗಗಳಲ್ಲಿ ಮೆರವಣಿಗೆ ಆಯೋಜಿಸದಿರುವಂತೆಯೂ ಸೂಚಿಸಲಾಗಿದೆ.
ಮೆರವಣಿಗೆಯಲ್ಲಿ ಭಾಗವಹಿಸುವ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳು ಮೆರವಣಿಗೆಯ ಸಮಯದಲ್ಲಿ ಪ್ರಚೋದನಕಾರಿ ಘೋಷಣೆ ಕೂಗುವುದು, ಮಾರಕ ವಸ್ತು ಕೊಂಡೊಯ್ಯುವುದು, ಸಾರ್ವಜನಿಕ ಸ್ಥಳದಲ್ಲಿ ಪ್ರತಿಕೃತಿ ಸುಡುವುದಕ್ಕೆ ಅನುಮತಿ ನಿರಾಕರಿಸಿರುವುದಾಗಿಯೂ ಆಯೋಗ ಸೂಚಿಸಿದೆ.




