ಮುಳ್ಳೇರಿಯ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಬೆಳ್ಳೂರು ಪಂಚಾಯಿತಿಯ ಇಬ್ಬರು ಮುಖಂಡರನ್ನು ಅಮಾನತುಗೊಳಿಸಲಾಗಿದೆ. ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮತ್ತು ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷೆ ಗೀತಾ ಕೆ ಮತ್ತು ನರೇಂದ್ರ ಗೌಡ ಅಮಾನತುಗೊಂಡವರು.
ಪಕ್ಷದ ರಾಜ್ಯ ಸಮಿತಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರ ಶಿಫಾರಸಿನನ್ವಯ ಜಿಲ್ಲಾಧ್ಯಕ್ಷೆ ಎಂ.ಎಲ್ ಅಶ್ವಿನಿ ಇಬ್ಬರನ್ನೂ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಸೂಚನೆಗಳಿಗೆ ವಿರುದ್ಧವಾಗಿ ವರ್ತಿಸಿ ಗಂಭೀರ ಶಿಸ್ತುಕ್ರಮ ಉಲ್ಲಂಘನೆ ಮಾಡಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಹೊರತುಪಡಿಸಿರುವುದಾಗ ಬಿಜೆಪಿ ಪ್ರಕಟಣೆ ತಿಳಿಸಿದೆ.

