ಈ ನಡುವೆ, ಬಂಗಾಳ ಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಶ್ರೀಲಂಕಾ ಜಲಪ್ರದೇಶದಲ್ಲಿ ಇನ್ನೊಂದು ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದು ತೀವ್ರಗೊಂಡು ವಾಯುಭಾರ ಕುಸಿತವಾಗಿ ಪರಿಣಮಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈ ಎರಡೂ ಹವಾಮಾನ ವೈಪರೀತ್ಯಗಳಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹೊರಡಿಸಲಾಗಿದೆ. ಈ ಸ್ಥಳಗಳಲ್ಲಿ ಬುಧವಾರ ಮತ್ತು ಗುರುವಾರ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.




