ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಪ್ರತಿಭಾ ಭಾರತಿ ಕಾರ್ಯಕ್ರಮವು ಗುರುವಾರ ನಡೆಯಿತು. ಮುಳ್ಳೇರಿಯಾ ಹವ್ಯಕ ಮಂಡಲ ಕಾರ್ಯದರ್ಶಿ ಹಾಗೂ ಬದಿಯಡ್ಕ ಶ್ರೀ ಭಾರತೀವಿದ್ಯಾಪೀಠದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಕೆರೆಮೂಲೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ, ಭಾರತೀಯರಾದ ನಾವು ಭಾರತೀಯ ಸಂಸ್ಕøತಿ ಪರಂಪರೆ, ಕಲೆಗಳನ್ನು ಪ್ರತಿಬಿಂಬಿಸುವವರಾಗಬೇಕು, ಇದಕ್ಕೆ ಪ್ರತಿಭಾ ಭಾರತಿ ವೇದಿಕೆಯಾಗಲಿ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು. ಹತ್ತನೇ ತರಗತಿಯ ಕು. ಪ್ರತೀಕ್ಷಾ ರೈ ಸಭಾಧ್ಯಕ್ಷತೆ ವಹಿಸಿ ಮಾತನಾಡಿದಳು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕುಮಾರ್ ಮಾಯಿಪ್ಪಾಡಿ, ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್.ಎಸ್. ಪ್ರಸಾದ್ ಹಿಳ್ಳೆಮನೆ, ಜೊತೆ ಕಾರ್ಯದರ್ಶಿ ಹಾಗೂ ಸಂಸ್ಕೃತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ, ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆಮಾರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕು. ಪ್ರೇರಣ ಸ್ವಾಗತಿಸಿ, ಕು. ಪೃಥ್ವಿ ವಂದಿಸಿದಳು. ಕು. ಅಕ್ಷರ ಹಾಗೂ ಕು. ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.




.jpg)
.jpg)
.jpg)
