ಕುಂಬಳೆ: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ ಸಹಯೋಗದಲ್ಲಿ ನಡೆಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಾಸರಗೋಡು ಗಡಿನಾಡಿನ ಪ್ರತಿಭೆ ತನ್ವಿ ಶಿವ ಎನ್ ಅವರಿಗೆ ಕನ್ನಡ ರಾಜ್ಯೋತ್ಸವ ಬಾಲ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಚಿತ್ರಾಪುರ ಮಠದ ಶ್ರೀ ವಿಜ್ಯೇಂದ್ಯ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಪೆÇ್ರ. ಎಂ ಬಿ ಪುರಾಣಿಕ್ ಪ್ರತಿಭಾಪುರಸ್ಕಾರ ಪ್ರದಾನ ಮಾಡಿದರು. ಈ ಸಂದರ್ಭ ಅಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಏ ಸಿ ಭಂಡಾರಿ, ಶಾಸಕ ವೇದವ್ಯಾಸ ಕಾಮತ್, ಪ್ರದೀಪ್ ಕುಮಾರ್ ಕಲ್ಕೂರ, ಕ ಸಾ ಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಅಖಿಲೇಶ್ ನಗಮುಗಂ, ರವಿ ನಾಯ್ಕಾಪು, ಹಿರಿಯ ಛಾಯಾಗ್ರಾಕ ಯಜ್ಞ ಮಂಗಳೂರು, ಸುರೇಶ್ ಶೆಟ್ಟಿ ಯೈಯಾಡಿ ಮೊದಲಾದವರು ಉಪಸ್ಥಿತರಿದ್ದರು.
ತನ್ವಿ ಅವರು ಉದ್ಯಮಿ ಶಿವಶಂಕರ ನೆಕ್ರಾಜೆ-ಜಯಲಕ್ಷ್ಮಿ ದಂಪತಿಯ ಪುತ್ರಿ.





