ಉಪ್ಪಳ: ಕುರುಡಪದವು ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಸ್ವಾಸ್ತ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶಾಲಾ ಮುಖ್ಯ ಶಿಕ್ಷಕಿ ಸಲೀಲ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಸೇವಾ ಪ್ರತಿನಿಧಿ ಶಿವರಾಮ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಅಧ್ಯಾಪಕ ಲೋಹಿತ್ ಭಂಡಾರಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸಹದೇವ ಸ್ವಾಗತಿಸಿದರು. ಅಧ್ಯಾಪಿಕೆಯರಾದ ಭವಿತ ನಿರೂಪಿಸಿದರು. ಸುಪ್ರಿಯ ವಂದಿಸಿದರು.





