ಕುಂಬಳೆ: ಹೆದ್ದಾರಿ ಪೆರುವಾಡ್‍ನಲ್ಲಿ ಸ್ಕೂಟರ್ ಹಗೂ ಕಾರು ಡಿಕ್ಕಿಯಾಗಿ ಗಂಭೀರ ಗಾಐಗೊಂಡಿದ್ದ ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತ, ಆರಿಕ್ಕಾಡಿ ಪಾರೆಸ್ಥಾನ ಸನಿಹದ ನಿವಾಸಿ ಎಸ್. ಹರೀಶ್ ಕುಮಾರ್(37)ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಒಬ್ಬ ಪುರುಷ ಹಾಗೂ ಮಹಿಳೆ ಗಾಯಗೊಂಡಿದ್ದು, ಇವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಸಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸೋಮವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಹರೀಶ್ ಕುಮಾರ್ ಅವರನ್ನು ಕುಂಬಳೆಯ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.
ವೈದ್ಯರ ನಿರ್ಲಕ್ಷ್ಯಆರೋಪ-ಪ್ರತಿಭಟನೆ:
ಹರೀಶ್ ಕುಮಾರ್ ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಹರೀಶ್‍ಕುಮಾರ್ ಅವರ ಮನೆಯವರು ಹಾಗೂ ಪಕ್ಷ ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರತಿಭಟನಾ ಧರಣಿ ನಡೆಸಿದರು. ಮನೆಯವರ ಹಾಗೂ ಪಕ್ಷದವರ ಆರೋಪದ ಹಿನ್ನೆಲೆಯಲ್ಲಿ ಮೃತದೇಹ ಉನ್ನತ ಶವಮಹಜರಿಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಯಿತು. ಕುಂಬಳೆ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.





