ಕಾಸರಗೋಡು: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನೇತಾರರ ಮಧ್ಯೆ ನಡೆದ ಹೊಡೆದಾಟದ ದೃಶ್ಯಗಳನ್ನು ದೃಶ್ಯ ಮಾಧ್ಯಮಗಳಿಗೆ ಪೂರೈಸಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾಸರಗೋಡು ಬ್ಲಾಕ್ ಸಮಿತಿ ಕಾರ್ಯದರ್ಶಿ ಕೆ.ಎಂ ಸಫ್ವಾನ್ ಕುನ್ನಿಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




