HEALTH TIPS

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು : ವೃಕ್ಷಗಳನ್ನೇ ಮಕ್ಕಳನ್ನಾಗಿ ಕಂಡ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. 

ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ 10 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಉಸಿರಾಟದ ಸಮಸ್ಯೆಯಿಂದಾಗಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಆರ್‌.ಅಶೋಕ್‌, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

"ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು"

ಸಿದ್ದರಾಮಯ್ಯ, ಮುಖ್ಯಮಂತ್ರಿ

"ಮರಗಳನ್ನೇ ತಮ್ಮ ಮಕ್ಕಳಂತೆ ಸಾಕಿ ಸಲಹಿದ ʻವೃಕ್ಷಮಾತೆʼ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾದ ಸುದ್ದಿ ಅತೀವ ದುಖಃ ನೀಡಿದೆ. ನಿಸರ್ಗ ಪ್ರೀತಿಯ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿದ್ದ ಅವರ ಅಸಾಮಾನ್ಯ ಬದುಕು ಮತ್ತು ಪರಿಸರಕ್ಕೆ ಅವರ ಕೊಡುಗೆ ಚಿರಸ್ಮರಣೀಯ. ವೃಕ್ಷಮಾತೆ ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ"

ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

"ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು 'ಮರಗಳೇ ನನ್ನ ಮಕ್ಕಳು' ಎಂದು ಘೋಷಿಸಿದ ವೃಕ್ಷಮಾತೆ, ನಮ್ಮ ಹೆಮ್ಮೆಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಪರಿಸರ ಸೇವೆಯನ್ನೇ ಮಾದರಿಯಾಗಿಸಿಕೊಂಡು ನಮ್ಮ ಸುತ್ತಮುತ್ತಲಿನ ಪರಿಸರವನ್ನ ಉಳಿಸಿ, ಬೆಳೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ"

ಆರ್‌.ಅಶೋಕ್‌, ವಿಪಕ್ಷ ನಾಯಕ

ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ ಮಹಾತಾಯಿ ಮರಗಳನ್ನೇ ಮಕ್ಕಳಂತೆ ಬೆಳೆಸುವ ಮೂಲಕ ಹಸಿರಿನ ಮಹತ್ವವನ್ನು ಜಗತ್ತಿಗೆ ಸಾರಿದ್ದರು. ಅನಕ್ಷರಸ್ಥರಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿ ಗೌರವ ಡಾಕ್ಟರೇಟ್ ಗೆ ಪಾತ್ರರಾಗಿದ್ದ ಅವರಿಗೆ ಪದ್ಮಶ್ರೀ ಸೇರಿದಂತೆ ಅತ್ಯುನ್ನತ ಪ್ರಶಸ್ತಿಗಳು ಲಭಿಸಿದ್ದವು. ಅಗಲಿದ ಹಿರಿಯ ಜೀವಕ್ಕೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ.

"ಪರಿಸರಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಿಟ್ಟು ಪ್ರಕೃತಿಗಾಗಿಯೇ ಬದುಕಿ ಬಾಳಿದ ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನಾಡಿಗೆ ಅವರು ನೀಡಿರುವ ಕೊಡುಗೆ, ಅವರಿಂದ ದೊರೆತಿರುವ ಪ್ರೇರಣೆ ಅಜರಾಮರ. ಅಗಲಿದ ಆ ಚೇತನಕ್ಕೆ ಚಿರಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ"


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries