ತಿರುವನಂತಪುರಂ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಮಹಿಳೆಯ ಮೊಬೈಲ್ ಪೋನ್ ಅನ್ನು ಎಸ್‍ಐಟಿ ವಶಕ್ಕೆ ಪಡೆದುಕೊಂಡಿದೆ. ರಾಹುಲ್ ವಿರುದ್ಧ ಸಾಕ್ಷ್ಯ ಸಂಗ್ರಹಿಸಲು ಇದನ್ನು ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಲಾಗುವುದು.
ರಾಹುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಬುಧವಾರ ಪರಿಗಣಿಸಲಿರುವ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಈ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದ ಫೆÇೀನ್ ಅನ್ನು ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಲಾಗುವುದು. ಮಹಿಳೆಗೆ ಗರ್ಭಪಾತ ಮಾಡಿಸಲು ಒತ್ತಾಯಿಸಿದ ಧ್ವನಿ ಸಂದೇಶ ತನ್ನದು ಎಂದು ರಾಹುಲ್ ಒಪ್ಪಿಕೊಂಡಿದ್ದರು. ಪತಿಯೊಂದಿಗೆ ಸಂಬಂಧವನ್ನು ಕೊನೆಗೊಳಿಸಿದ ನಂತರ ರಾಹುಲ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ಪೆÇಲೀಸರಿಗೆ ಹೇಳಿಕೆ ನೀಡಿದ್ದರು.
ರಾಹುಲ್ ಜಾಮೀನು ಅರ್ಜಿಯಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಇದು ಒಪ್ಪಿಗೆಯಿಂದಾಗಿತ್ತು ಎಂದು ವಾದಿಸಲಾಗಿದೆ. ಆದ್ದರಿಂದ, ಅತ್ಯಾಚಾರ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಮಹಿಳೆ ಎದುರಾಳಿ ರಾಜಕೀಯ ಪಕ್ಷದಲ್ಲಿ ಪ್ರಭಾವಿಯಾಗಿರುವ ಖಾಸಗಿ ಸಂಸ್ಥೆಯ ಉದ್ಯೋಗಿ. ತನ್ನ ವಿರುದ್ಧ ದೂರು ದಾಖಲಿಸದಿದ್ದರೆ ಸಂಸ್ಥೆಯಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ ಎಂದು ಆಡಳಿತ ಮಂಡಳಿ ಬೆದರಿಕೆ ಹಾಕಿದೆ ಎಂದು ಮಹಿಳೆ ತನ್ನ ಜಾಮೀನು ಅರ್ಜಿಯಲ್ಲಿ ವಾದಿಸಿದ್ದಾರೆ.
ಶಬರಿಮಲೆ ಚಿನ್ನದ ಲೂಟಿ ಪ್ರಕರಣದಿಂದ ಸಾರ್ವಜನಿಕ ಗಮನವನ್ನು ಬೇರೆಡೆ ಸೆಳೆಯಲು ತನ್ನ ವಿರುದ್ಧದ ಆರೋಪಗಳು ಮತ್ತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ರಾಹುಲ್ ಹೇಳುತ್ತಾರೆ.




