ಕೋಝಿಕ್ಕೋಡ್: ರೈಲು ಪ್ರಯಾಣಿಕರ ಭದ್ರತಾ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಪೋಲೀಸ್ ಮುಖ್ಯಸ್ಥರು ಪೋಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ರೈಲ್ವೆ ಪೋಲೀಸರ ಜೊತೆಗೆ, ಅಗತ್ಯವಿದ್ದರೆ, ಭದ್ರತೆಯನ್ನು ಬಿಗಿಗೊಳಿಸಲು ಸ್ಥಳೀಯ ಠಾಣೆಗಳಿಂದ ಪೋಲೀಸ್ ಅಧಿಕಾರಿಗಳನ್ನು ರೈಲ್ವೆ ನಿಲ್ದಾಣಕ್ಕೆ ತಾತ್ಕಾಲಿಕವಾಗಿ ನಿಯೋಜಿಸಲು ಸೂಚನೆಗಳನ್ನು ನೀಡಲಾಗಿದೆ. ವರ್ಕಲದಲ್ಲಿ ಪ್ರಯಾಣಿಕರೊಬ್ಬರು ಹುಡುಗಿಯ ಮೇಲೆ ಹಲ್ಲೆ ನಡೆಸಿ ಹೊರಗೆ ತಳ್ಳಿದ ಘಟನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ರೈಲುಗಳಲ್ಲಿ ವಿಶೇಷ ತಪಾಸಣೆಗಳ ಜೊತೆಗೆ, ಪ್ಲಾಟ್‍ಫಾರ್ಮ್‍ಗಳಲ್ಲಿಯೂ ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ. ರೈಲುಗಳು ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಯಾರಾದರೂ ಕುಡಿದು ಪ್ರಯಾಣಿಸುತ್ತಿರುವುದು ಕಂಡುಬಂದರೆ, ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರಯಾಣಕ್ಕೆ ಅಡ್ಡಿಪಡಿಸುವುದಲ್ಲದೆ, ಪ್ರಕರಣ ದಾಖಲಿಸಲಾಗುವುದು ಎಂದು ಪೆÇಲೀಸರು ತಿಳಿಸಿದ್ದಾರೆ. ರೈಲುಗಳ ಒಳಗೆ ಯಾರಾದರೂ ಕುಡಿದು ಇರುವುದು ಕಂಡುಬಂದರೆ, ಅವರನ್ನು ಮುಂದಿನ ನಿಲ್ದಾಣದಲ್ಲಿ ಇಳಿಸಿ, ಕ್ರಮ ಕೈಗೊಳ್ಳಲು ಪೋಲೀಸ್ ಠಾಣೆಗೆ ಕರೆದೊಯ್ಯಲಾಗುತ್ತದೆ.




