ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪೇರಾಲ್‍ಕಣ್ಣೂರು ಪೊಟ್ಟೋರಿ ಎಂಬಲ್ಲಿ ಅನಧಿಕೃತವಾಗಿ ಮಣ್ಣು ಸಂಗ್ರಹಿಸುತ್ತಿದ್ದ ಪ್ರದೇಶಕ್ಕೆ ದಾಳಿ ನಡೆಸಿರುವ ಪೊಲೀಸರು ಜೆಸಿಬಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವರದಿಯನ್ನು ಭೂಗರ್ಭ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪೊಟ್ಟೋರಿಯಲ್ಲಿ ವ್ಯಕ್ತಿಯೊಬ್ಬರ ಮಾಲಿಕತ್ವದ ಜಾಗದಿಂದ ಭಾರೀ ಪ್ರಮಾಣದಲ್ಲಿ ಮಣ್ಣು ಸಾಗಾಟ ನಡೆಸುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯನ್ವಯ ಎಸ್.ಐ ಪ್ರದೀಪ್ ಕುಮಾರ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. ಪೊಲೀಸರನ್ನು ಕಂಡು ಟಿಪ್ಪರ್ ಚಾಲಕರು ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಜೆಸಿಬಿ ಚಾಲಕ ಸೂಕ್ತ ದಾಖಲೆಗಳನ್ನು ಸಲ್ಲಿಸದಿರುವುದರಿಂದ ಪರಿಶೀಲಿಸಿದಾಗ ಜೆಸಿಬಿ ನಂಬರ್‍ಪ್ಲೇಟ್ ನಕಲಿ ಎಂದು ತಿಳಿದುಬಂದಿದೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.




