ಕೊಚ್ಚಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ಏಳನೇ ಆರೋಪಿ ತಿರುವಾಭರಣಂನ ಮಾಜಿ ಆಯುಕ್ತ ಕೆ.ಎಸ್. ಬೈಜು ಅವರನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ) ಮತ್ತೆ ವಶಕ್ಕೆ ಪಡೆದಿದೆ.
ಹೊಸ ಶೋಧನೆಗಳ ಆಧಾರದ ಮೇಲೆ ಹೇಳಿಕೆ ದಾಖಲಿಸುವುದು ಅಗತ್ಯ ಎಂಬ ಎಸ್‍ಐಟಿಯ ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯವು ಅವರನ್ನು ಒಂದು ದಿನದ ಕಸ್ಟಡಿಗೆ ಒಪ್ಪಿಸಿದೆ. ದ್ವಾರಪಾಲಕ ಮೂರ್ತಿಗಳಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬೈಜು ಅವರನ್ನು ವಶಕ್ಕೆ ಪಡೆಯಲಾಗಿದೆ.
ಈ ಮಧ್ಯೆ, ಗೋಡೆಯ ಹೊದಿಗೆ ಸಂಬಂಧ ನಡೆದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಬೈಜು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯ ತಿರಸ್ಕರಿಸಿದೆ.




