HEALTH TIPS

ದೆಹಲಿ ಸ್ಪೋಟ: ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ: ರಾಜನಾಥ

ನವದೆಹಲಿ: 'ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು (ಮಂಗಳವಾರ) ಹೇಳಿದ್ದಾರೆ. 

ದೆಹಲಿಯ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಟ್ರಾಫಿಕ್ ಸಿಗ್ನಲ್ ಬಳಿ ಸೋಮವಾರ ಸಂಜೆ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

'ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ತ್ವರಿತ ಹಾಗೂ ಸಮಗ್ರ ತನಿಖೆ ನಡೆಸುತ್ತಿವೆ' ಎಂದು ರಾಜನಾಥ ಸಿಂಗ್ ಹೇಳಿದ್ದಾರೆ.

ಈ ಸ್ಫೋಟದ ಹಿಂದಿನ ಕಾರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

'ತನಿಖೆಯ ವಿವರಗಳನ್ನು ಬೇಗನೇ ಬಹಿರಂಗಪಡಿಸಲಾಗುವುದು. ಸ್ಫೋಟಕ್ಕೆ ಕಾರಣರಾದವರನ್ನು ನ್ಯಾಯಾಲಯದ ಕಟಕಟೆಗೆ ತರಲಾಗುವುದು. ಯಾವ ಕಾರಣಕ್ಕೂ ಬಿಡಲಾಗುವುದಿಲ್ಲ ಎಂದು ನಾನು ದೇಶದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ' ಎಂದು ರಾಜನಾಥ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಫೋಟದಲ್ಲಿ ಮೃತಪಟ್ಟವರಿಗೆ ರಕ್ಷಣಾ ಸಚಿವರು ಸಂತಾಪ ಸೂಚಿಸಿದ್ದಾರೆ. 'ಈ ಕಠಿಣ ಸಮಯದಲ್ಲಿ ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೇವರು ದಯಪಾಲಿಸಲಿ' ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries