ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ದೇವರಗುಡ್ಡೆ ಶ್ರೀ ಶೈಲ ಮಹಾದೇವ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ನಿರ್ದೇಶನದಲ್ಲಿ ಡಿಸೆಂಬರ್ 16 ರಿಂದ ಜನವರಿ 14 ರ ತನಕ ನಡೆಯಲಿರುವ ಧನುಮಾಸ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಧನುಪೂಜಾ ಸಮಿತಿ ಅಧ್ಯಕ್ಷ ರಮೇಶ ಗಂಗೆ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಸುಭಾಷ್ ಪಾಟಾಳಿ ಅವರಿಗೆ ಮೊದಲ ಪ್ರತಿ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಈ ಸಂದರ್ಭ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಶಾಂತ್ ಗಂಗೆ ವೈದಿಕ ಸಮಿತಿ ಅಧ್ಯಕ್ಷರಾದ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.





