ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರ 78 ನೇ ವರ್ಷದ ಜನ್ಮ ದಿನದ ಅಂಗವಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಘಟಕ ವತಿಯಿಂದ ಕಾಸರಗೋಡು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಪಾಯಸ ಒಳಗೊಂಡ ಬಿಸಿ ಗಂಜಿಯೂಟ ವಿತರಿಸಲಾಯಿತು.
ಭಜನಾ ಪರಿಷತ್ ತಾಲೂಕು ಘಟಕ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಗ್ರಾಮಾಭಿವೃದ್ಧಿ ಯೋಜನೆಯ ಆಂತರಿಕ ಲೆಕ್ಕ ಪರಿಶೋಧಕರು ಮೋನಪ್ಪ ಕೆ, ತಾಲೂಕಿನ ಕೇಂದ್ರ ಒಕ್ಕೂಟ ಅಧ್ಯಕ್ಷ ಜ್ಞಾನೇಶ ಆಚಾರ್ಯ ಮೊದಲಾದವರು ಸಹಕರಿಸಿದರು.





