ಮಂಜೇಶ್ವರ: ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ತೀರ್ಪುಗಾರರಾಗಿ ನಿವೃತ್ತ ಮುಖ್ಯ ಶಿಕ್ಷಕ ಭಾಸ್ಕರ ಶೆಟ್ಟಿಗಾರ್, ನಿವೃತ್ತ ಶಿಕ್ಷಕರಾದ ವಿಜಯ ಕುಮಾರ್ ಮತ್ತು ನಾಗರಾಜ್ ಸಹಕರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ಉದ್ಘಾಟಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೆÇಯ್ಯೇಲು, ಹಳೆ ವಿದ್ಯಾರ್ಥಿ ಜನಾರ್ಧನ ಪೂಜಾರಿ ಕುಳೂರು, ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಸಿ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಿಯಾಂಕ ಕೇಮಜಲ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲೆಗೆ ಹಲವಾರು ಕೊಡುಗೈ ದಾನಿಗಳ ಮೂಲಕ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲು ಸಹಕರಿಸಿದ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಸಿ ಶೆಟ್ಟಿ ಚಾರ್ಲರವರನ್ನು ಶಾಲಾ ಶಿಕ್ಷಕ ವೃಂದದ ಪರವಾಗಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವ ಮತ್ತು ವಿಜ್ಞಾನೋತ್ಸವದ ಪ್ರತಿಭೆಗಳಿಗೆ ಬಹುಮಾನ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು. ಶಿಕ್ಷಕಿಯರಾದ ಶ್ವೇತ ಇ. ಮತ್ತು ಅಶ್ವಿನಿ ಎಂ. ನಡೆಸಿಕೊಟ್ಟರು. ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು ಸ್ವಾಗತಿಸಿ, ಶಿಕ್ಷಕಿ ನಯನ ಎಂ. ವಂದಿಸಿದರು. ಶಿಕ್ಷಕಿ ಸೌಮ್ಯ ಪಿ. ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳಿಂದ 'ದಾಯೆ ಇಂಚಾಂಡ್?' ಎಂಬ ತುಳು ಕಿರು ನಾಟಕ ಪ್ರದರ್ಶನ ನಡೆಯಿತು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.




.jpg)
.jpg)
