ಕೊಚ್ಚಿ: ಕಳಮಸ್ಸೇರಿಯಲ್ಲಿ ಸರಕು ರೈಲು ಎಂಜಿನ್ ಹಳಿ ತಪ್ಪಿದ ಘಟನೆ ವರದಿಯಾಗಿದ್ದು ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ.
ಶಂಟಿಂಗ್ ಮಾಡುವಾಗ, ಎಂಜಿನ್ ಹಳಿ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಶುಕ್ರವಾರ ಮಧ್ಯಾಹ್ನ 2.50 ಕ್ಕೆ ಸಂಭವಿಸಿದ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಪಘಾತದ ನಂತರ, ಶೋರ್ನೂರಿಗೆ ತೆರಳುವ ಒಂದು ಮಾರ್ಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿತು. ರೈಲ್ವೆ ಪೋಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿ ಕ್ರಮ ಕೈಗೊಂಡಿದೆ.
ಅಪಘಾತದ ಬಗ್ಗೆ ತನಿಖೆ ಆರಂಭಿಸಲಾಗಿದೆ ಮತ್ತು ಈ ಮಾರ್ಗದಲ್ಲಿ ರೈಲು ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.




