ಮಂಜೇಶ್ವರ: ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಗ್ರಾಮ ಪಂಚಾಯತಿ ವತಿಯಿಂದ ದೊರೆತ ಶೌಚಾಲಯಗಳ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು.
ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್.ಶೆಟ್ಟಿ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ಕುಳೂರು, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ. ಶುಭಹಾರೈಸಿದರು. ಅಭಿಯಂತ ಸಾಯಿತ್ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ. ವಂದಿಸಿದರು.




.jpg)
