ನೆಲ್ಲಿಕಾಯಿ ರಸವನ್ನು ಕುಡಿಯುವುದರಿಂದ ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ನೆಲ್ಲಿಕಾಯಿಯಲ್ಲಿ ನಾರಿನಂಶ ಹೇರಳವಾಗಿದೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ. ನೆಲ್ಲಿಕಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಯೌವನ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ನೆಲ್ಲಿಕಾಯಿಯಲ್ಲಿರುವ ಪೆÇೀಷಕಾಂಶಗಳು ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಮಧುಮೇಹ ಇರುವವರಿಗೆ ನೆಲ್ಲಿಕಾಯಿ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ನಿಯಮಿತವಾಗಿ ನೆಲ್ಲಿಕಾಯಿ ರಸವನ್ನು ಕುಡಿಯುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ನೆಲ್ಲಿಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ, ಇದು ಯಕೃತ್ತಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.




