ಕಾಸರಗೋಡು: ಜಿಲ್ಲೆಯ ವಿವಿಧೆಡೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದಲ್ಲಿ ನಿಷೇಧಿತ ತಂಬಾಕು ಉತ್ಪನ್ನ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿ, ಸಾಗಾಟಕ್ಕೆ ಬಳಸಿದ್ದ ಮೂರು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚೆರ್ಕಳ ಪಾಡಿ ರಸ್ತೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 12218 ಪ್ಯಾಕೆಟ್ ತಂಬಾಕು ಉತ್ಪನ್ನ ವಶಪಡಿಸಿಕೊಂಡು ಮಧೂರು ಚೆಟ್ಟುಂಗುಳಿ ನಿವಾಸಿ ರಾಶಿದ್ ಎಂಬಾತನನ್ನು ಬಂದಿಸಿ ಕಾರು ವಶಪಡಿಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 7600ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಹಾಗೂ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಘಿದ್ದಾರೆ. ವಿದ್ಯಾನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಮಂಜೇಶ್ವರ ಠಾಣೆ ಪೊಲೀಸರು ತಲಪ್ಪಾಡಿ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 26112ಪ್ಯಾಕೆಟ್ ತಂಬಾಕು ಉತ್ಪನ್ನ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕುಬಣೂರು ಅಗರ್ತಿಮೂಲೆ ನಿವಾಸಿ ಮೊಯ್ದೀನ್‍ಕುಞÂ ಎಂಬಾತನನ್ನು ಬಂಧಿಸಿದ್ದಾರೆ.




