ತಿರುವನಂತಪುರಂ: ಪೊಲೀಸ್ ವಶದದಲ್ಲಿದ್ದ ಹಣಕಾಸು ವಂಚನೆ ಪ್ರಕರಣದ ಆರೋಪಿಯೊಬ್ಬ ಆಸ್ಪತ್ರೆಯ ತುರ್ತು ನಿಗಾ ಘಟಕದ ಕಿಟಕಿ ಹಾರಿ ಪರಾರಿಯಾದ ಘಟನೆ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ ಘಟನೆ ನಡೆದಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.
ಕೊಲ್ಲಂ ಪೂರ್ವ ಪೊಲೀಸರ ಕಸ್ಟಡಿಯಲ್ಲಿದ್ದ ರಾಜೀವ್ ಎಂಬಾತನೇ ಪರಾರಿಯಾಗಿರುವ ವ್ಯಕ್ತಿ.
ಭಾನುವಾರ ರಾತ್ರಿ ಸುಸ್ತು ಹಾಗೂ ಎದೆನೋವು ಕಾಣಿಸಿಕೊಂಡಿದ್ದರಿಂದ ಆತನನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಐಸಿಯು ಕೊಠಡಿಯ ಕಿಟಕಿಯಿಂದ ಹಾರಿ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆ.




