ಬದಿಯಡ್ಕ: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಯೋಗ ಸಾಧಕಿ ಸನ್ನಿಧಿ ಪಳ್ಳತ್ತಡ್ಕ ಇವರಿಗೆ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರು ರಾಜ್ಯೋತ್ಸವ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ. ವಿಟ್ಲ ಜೇಸೀ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯಾದ ಸನ್ನಿಧಿ ಪಳ್ಳತ್ತಡ್ಕ ಅನೇಕ ಯೋಗಾಸನ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಬಹುಮಾನಗಳನ್ನು ಪಡೆದುಕೊಂಡಿದ್ದಳು. ರಾಷ್ಟ್ರ, ರಾಜ್ಯಮಟ್ಟದಲ್ಲಿ ಈಕೆಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಯಿತು.
ಕರಂದಕ್ಕಾಡು ಯೋಗ ಫೋರ್ ಕಿಡ್ಸ್‍ನಲ್ಲಿ ಅಧ್ಯಾಪಿಕೆ ತೇಜಕುಮಾರಿ ಅವರಿಂದ ತರಬೇತಿಯನ್ನು ಪಡೆದಿದ್ದಳು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಹಳೆವಿದ್ಯಾರ್ಥಿಯಾದ ಈಕೆ ಪಳ್ಳತ್ತಡ್ಕ ಕೇಶವ ಶರ್ಮ, ದಿವ್ಯಾ ಇವರ ಪುತ್ರಿ. ಮಂಗಳೂರು ಡಾನ್‍ಬಾಸ್ಕೋ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಶಾರದ ವಿದ್ಯಾ ಸಂಸ್ಥೆಗಳ ಮುಖ್ಯಸ್ಥ ಎಂ.ಬಿ.ಪುರಾಣಿಕ್, ಕ.ಸಾ.ಪ.ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸುರೇಶ್ ಶೆಟ್ಟಿ ಯಯ್ಯಾಡಿ, ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.




.jpg)
