ಮಂಜೇಶ್ವರ: ಬಂಗ್ರಮಂಜೇಶ್ವರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್‍ವನ್ ಹಾಗೂ ಪ್ಲಸ್‍ಟು ತರಗತಿ ವಿದ್ಯಾರ್ಥಿಗಳ ತಂಡವೊಂದು ಪರಸ್ಪರ ಹೊಡೆದಾಡಿಕೊಂಡಿದ್ದು, ಆಸುಪಾಸಿನವರಲ್ಲಿ ಆತಂಕಕ್ಕ ಕಾರಣವಾಯಿತು.
ವಾಗ್ವಾದ ನಡೆಸುತ್ತಿದ್ದ ವಿದ್ಯಾರ್ಥಿಗಳ ತಂಡ ಏಕಾಏಕಿ ಹೊಡೆದಾಡಿಕೊಂಡು, ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತವರಣ ಸೃಷ್ಟಿಸಿತ್ತು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು ಓಡಿ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹನ್ನೊಂದು ಮಂದಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸ್ವಇಚ್ಛೆಯಿಂದ ಕೇಸು ದಾಖಲಿಸಿಕೊಂಡಿದ್ದಾರೆ.




