ಕಾಸರಗೋಡು: ಜಿಲ್ಲಾ ಮಟ್ಟದ ಶಾಲಾ ಕಲೋತ್ಸವವನ್ನು ಮೊಗ್ರಾಲ್‍ಪುತ್ತೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲು ತೀರ್ಮಾನಿಸಲಾಘಿದೆ. ಈ ಹಿಂದೆ ಜಿಲ್ಲಾ ಶಾಲಾ ಕಲೋತ್ಸವವನ್ನು ನ. 24ರಿಂದ 29ರ ವರೆಗೆ ಕುಂಡಂಗುಳಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದರೂ, ಕೆಲವೊಂದು ಅಸೌಕರ್ಯ ಹಾಗೂ ಅನಾನುಕೂಲತೆಗಳಿರುವುದನ್ನು ಶಾಲಾ ಅಧಿಕಾರಿಗಳು ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಗೆ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮೊಗ್ರಾಲ್‍ಪುತ್ತುರು ಶಾಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೊಗ್ರಾಲ್ ಶಾಲೆಯಲ್ಲಿ ಜಿಲ್ಲಾ ಶಾಲಾ ಕಲೋತ್ಸವ ನಡೆಸುವ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಸಕಾರಾತ್ಮ ನಿಲುವು ಕೈಗೊಂಡಿದೆ.




