ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನ. 25ರಂದು ದೇವಸ್ಥಾನ ಸಭಾಂಗಣದಲ್ಲಿಜರುಗಲಿದೆ. ಶ್ರೀ ವಿಷ್ಣುಮೂರ್ತಿ ಯುವಕ ಸಂಘದ ವತಿಯಿಂದ ಕಾರ್ಯಕ್ರಮ ನಡೆಯುವುದು. ಕಾರ್ಯಕ್ರಮದ ಆಮಂತ್ರಣಪತ್ರಿಕೆ ಬಿಡುಗಡೆ ಸಮಾರಂಭ ದೇವಾಲಯದಲ್ಲಿ ಜರುಗಿತು. ದೇವಸ್ಥಾನದ ಮುಖ್ಯ ಅರ್ಚಕ ಕೃಷ್ಣರಾಜ ಪುಣಿಂಚಿತ್ತಾಯ ಅವರು ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾನಂದ ಶೆಟ್ಟಿ ಕುದ್ವ ಅವರಿಗೆ ಹಸ್ತಾಂತರಸುವ ಮೂಲಕ ಬಿಡುಗಡೆಗೊಳಿಸಿದರು. ಯುವಕಸಂಘ, ಮಹಿಳಾ ಸಂಘದ ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.





