HEALTH TIPS

ಬಿಹಾರ ಚುನಾವಣೆ: ಸೋಲಿನ ಪರಾಮರ್ಶೆಯಲ್ಲಿ ಕಾಂಗ್ರೆಸ್‌ ನಾಯಕರು

 ನವದೆಹಲಿ: ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿತ್ತು. ಸೋಲಿನ ಪರಾಮರ್ಶೆ ಸಂಬಂಧ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಬಿಹಾರ ನಾಯಕರು ಚರ್ಚೆ ನಡೆಸಿದ್ದಾರೆ.


ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಬಿಹಾರ ನಾಯಕರು ಖರ್ಗೆ ಮನೆಯಲ್ಲಿ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಹಾರ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ ನಾಯಕರು, ಇತ್ತೀಚಿನ ವಿಧಾನಸಭೆಗೆ ಸೋಲಿಗೆ ಕಾರಣಗಳೇನು ಎಂದು ಪರಾಮರ್ಶಿಸಿಕೊಂಡಿದ್ದಾರೆ.

ಎನ್‌ಡಿಎ ಸರ್ಕಾರ ಮಹಿಳೆಯರ ಪರವಾಗಿ ಘೋಷಿಸಿದ ಯೋಜನೆಗಳು, ಪಕ್ಷದ ಆಂತರಿಕ ಕಲಹ ಹಾಗೂ ಭಿನ್ನಾಭಿಪ್ರಾಯಗಳು. ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವಲ್ಲಿ ವಿಳಂಬ ಸೇರಿದಂತೆ ಅನೇಕ ಅಂಶಗಳು ಸೋಲಿಗೆ ಕಾರಣವಾಗಿವೆ ಎಂದು ನಾಯಕರು ತಿಳಿಸಿದ್ದಾರೆ.

ಪಕ್ಷದ ಸೋಲಿಗೆ ಕಾರಣಗಳನ್ನು ತಿಳಿದುಕೊಳ್ಳಲು ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಇಂದಿರಾ ಭವನದಲ್ಲಿ ಬಿಹಾರದ ನಾಯಕರು ಮತ್ತು ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳನ್ನು ಭೇಟಿಯಾಗಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟದ ಕಾಂಗ್ರೆಸ್ ಪಕ್ಷವು 61 ಕ್ಷೇತ್ರ, ಆರ್‌ಜೆಡಿ ಪಕ್ಷವು 143 ಕ್ಷೇತ್ರ, ಸಿಪಿಐ (ಎಂಎಲ್) ಪಕ್ಷವು 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ ಕಾಂಗ್ರೆಸ್‌ ಕೇವಲ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ..

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಿತು. ನವೆಂಬರ್ 14ರಂದು ಫಲಿತಾಂಶ ಹೊರ ಬಿದ್ದಿತ್ತು.

202 ಸ್ಥಾನಗಳಲ್ಲಿ ಎನ್‌ಡಿಎ ಜಯಭೇರಿ ಬಾರಿಸಿತ್ತು. ಮತ್ತೆ ನಿತೀಶ್‌ ಕುಮಾರ್‌ ಅವರೇ ಮುಖ್ಯಮಂತ್ರಿಯಾಗಿದ್ದಾರೆ.










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries