ಕಾಸರಗೋಡು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ರಾಜ್ಯ ಸಮಿತಿ ಸದಸ್ಯರಾಗಿ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ, ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ಎ.ಆರ್ ಸುಬ್ಬಯ್ಯಕಟ್ಟೆ ಅಧ್ಯಕ್ಷತೆಯಲ್ಲಿ ಕುಂಬಳೆಯಲ್ಲಿ ನಡೆದ ಕೆಯುಡಬ್ಲ್ಯೂಜೆ ಜಿಲ್ಲಾಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸದಸ್ಯ, ವಕೀಲ ಥಾಮಸ್ ಡಿ.ಸೋಜ ರಾಜ್ಯಕಾರ್ಯಕಾರಿ ಸಮಿತಿಗೆ ರಾಧಾಕೃಷ್ಣ ಉಳಿಯತ್ತಡ್ಕ ಅವರ ಹೆಸರನ್ನು ಸೂಚಿಸಿದರು. ಶ್ರೀಕಾಂತ್ ನೆಟ್ಟಣಿಗೆ ಅನುಮೋದಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಅವರು ರಾಧಾಕೃಷ್ಣ ಉಳಿಯತ್ತಡ್ಕ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ.
ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ರಾಧಾಕೃಷ್ಣ ಉಳಿಯತ್ತಡ್ಕ ಅವರು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ವದಿಗಾರರಾಗಿ, ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಜನಪರ ವರದಿಗಾರಿಕೆಗಾಗಿ ಪತ್ರಕರ್ತರ ವೇದಿಕೆ ಬೆಂಗಳೂರು, ಕರ್ನಾಟಕ ಮೀಡಿಯಾ ಮತ್ತು ನ್ಯೂಸ್ ಸೆಂಟರ್ ಬೆಂಗಳೂರು ಸಂಸ್ಥೆಯಿಂದ ಹೂಗರ ಸ್ಮಾರಕ ಮಾಧ್ಯಮ ಪ್ರಶಸ್ತಿ, ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಜೋದಯ ದತ್ತಿನಿಧಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಗಡಿನಾಡ ಚೇತನ ಪ್ರಶಸ್ತಿ ಲಭಿಸಿದೆ.





