ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ 'ಧಾನ್ಯ ಲಕ್ಷ್ಮಿ' ಕೃಷಿ ಯೋಜನೆಯಡಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಭತ್ತವನ್ನು ಕಟಾವು ಮಾಡುವ ವರ್ಷಂಪ್ರತಿ ನಡೆಯುವ ಕೊಯ್ಲು ಉತ್ಸವ ನ. 16 ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಬಕ್ತರು ಪಾಲ್ಗೊಳ್ಳಬೇಕೆಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




