ಮಂಜೇಶ್ವರ: ಇಲ್ಲಿಯ ಶ್ರೀಮದ್ ಅನಂತೇಶ್ವರ ದೇವಳದ ಶಾಲೆಯ ವಿದ್ಯಾರ್ಥಿ ಪೃಥ್ವಿನ್ ಪ್ರಭು ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ 600 ಮೀಟರ್ ಓಟದಲ್ಲಿ ಐದನೇ ಸ್ಥಾನ ಪಡೆದು ಶಾಲೆ ಕೀರ್ತಿ ತಂದಿದ್ದಾನೆ.
ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಮುಖ ಆಟಗಾರನಾಗಿ ಹೊರಹೊಮ್ಮಿದ್ದಾನೆ. ಮಾತ್ರವಲ್ಲ ಕಾಸರಗೋಡು ತಂಡ ರನ್ನರ್ಸ್ ಆಗಿ ಹೊರ ಹೊಮ್ಮಿದೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ, ಅಭಿನಂದನೆಗಳನ್ನು ಸಲ್ಲಿಸಿದರು.




-PRUTHWIN%20PRABHU.jpg)
