ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದ ಅಲಿಪಿರಿ ಸಮೀಪ ಮಾಂಸಾಹಾರ ಸೇವಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವಜಾಗೊಳಿಸಿದೆ.
ಈ ಸಂಬಂಧ ತಿರುಮಲದ ಎರಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲಿಪಿರಿ ಬಳಿ ಮಾಂಸಾಹಾರ ಆಹಾರ ಸೇವಿಸಿದ ಇಬ್ಬರು ಹೊರಗುತ್ತಿಗೆ ನೌಕರರಾದ ರಾಮಸ್ವಾಮಿ ಮತ್ತು ಸರಸಮ್ಮ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಟಿಟಿಡಿ ಅಧಿಕೃತ ಪ್ರಕಟಣೆ ತಿಳಿಸಿದೆ.
ಆಂಧ್ರಪ್ರದೇಶ ದಾನ ಮತ್ತು ದತ್ತಿ ಕಾಯ್ದೆಯ ಸೆಕ್ಷನ್ 114ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




