ಗುವಾಹಟಿ: ಬಹುಪತ್ನಿತ್ವ ನಿಷೇಧಕ್ಕೆ ಸಂಬಂಧಿಸಿದ ಮಸೂದೆಯನ್ನು ಅಸ್ಸಾಂ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ನವೆಂಬರ್ 25ರಂದು ನೂತನ ಮಸೂದೆಯನ್ನು ಮಂಡಿಸಲಾಗುವುದು. ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುವುದು ಎಂದೂ ಹೇಳಿದ್ದಾರೆ.




